
ಪ್ರಜಾವಾಣಿ ವಾರ್ತೆ
ನವದೆಹಲಿ: ವಿರಳ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆ (ಎ.ಐ) ಕ್ಷೇತ್ರಗಳಲ್ಲಿ ಪೂರೈಕೆ ಸರಪಳಿ ಸೃಷ್ಟಿಸುವ ಉದ್ದೇಶದಿಂದ ಅಮೆರಿಕ ನೇತೃತ್ವದ ‘ಪ್ಯಾಕ್ಸ್ ಸಿಲಿಕಾ’ ಒಕ್ಕೂಟಕ್ಕೆ ಭಾರತ ಶುಕ್ರವಾರ ಸೇರ್ಪಡೆಯಾಗಿದೆ.
‘ಭಾರತ– ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಅಡಿಯಲ್ಲಿ ‘ಪ್ಯಾಕ್ಸ್ ಸಿಲಿಕಾ’ದೊಂದಿಗಿನ ಸಹಕಾರವು ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಪೂರೈಕೆ ಸರಪಳಿಯನ್ನು ಮತ್ತಷ್ಟು ಬಲಗೊಳಿಸುತ್ತದೆ. ಇದು ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉದ್ಯಮಕ್ಕೆ ಹೆಚ್ಚಿನ ಪ್ರಯೋಜನ ನೀಡುತ್ತದೆ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.