ADVERTISEMENT

ದೇಶದಲ್ಲಿ 19,893 ಕೋವಿಡ್ ಹೊಸ ಪ್ರಕರಣ ಪತ್ತೆ: 53 ಜನರ ಸಾವು

1,36,478 ಕೋವಿಡ್ ಸಕ್ರಿಯ ಪ್ರಕರಣ

ಪಿಟಿಐ
Published 4 ಆಗಸ್ಟ್ 2022, 6:20 IST
Last Updated 4 ಆಗಸ್ಟ್ 2022, 6:20 IST
   

ನವದೆಹಲಿ: ದೇಶದಲ್ಲಿ ಗುರುವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 19,893 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ತಿಳಿಸಿದೆ.

ಈವರೆಗೆ ಭಾರತದಲ್ಲಿ 4,40,87,037 ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು, ಈ ಪೈಕಿ ಒಟ್ಟು 1,36,478 ಸಕ್ರಿಯ ಪ್ರಕರಣಗಳು ಇವೆ ಎಂದು ದತ್ತಾಂಶ ಹೇಳಿದೆ.

ಕಳೆದ 24 ಗಂಟೆ ಅವಧಿಯಲ್ಲಿ 53 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, ಒಟ್ಟು ಮರಣದ ಪ್ರಮಾಣ 5,26,530ಕ್ಕೆ ಏರಿಕೆಯಾಗಿದೆ.

ADVERTISEMENT

ದೈನಂದಿನ ಪಾಸಿಟಿವಿಟಿ ದರ ಶೇ 4.94ರಷ್ಟಿದೆ ಎಂದು ಸಚಿವಾಲಯ ಹೇಳಿದೆ.

ಒಟ್ಟು 205.22 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.