ADVERTISEMENT

ಚೀನಾದ 54 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸುವ ಸಾಧ್ಯತೆ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2022, 5:31 IST
Last Updated 14 ಫೆಬ್ರುವರಿ 2022, 5:31 IST
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)   

ನವದೆಹಲಿ: ದೇಶದ ಭದ್ರತೆಗೆ ಅಪಾಯ ಇರುವ ಕಾರಣ ಚೀನಾದ 54 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಬ್ಯೂಟಿ ಕ್ಯಾಮರಾ;ಸ್ವೀಟ್‌ ಸೆಲ್ಫಿ ಎಚ್‌ಡಿ, ಈಕ್ವಲೈಜರ್ & ಬಾಸ್ ಬೂಸ್ಟರ್, ವಿವಾ ವಿಡಿಯೊ ಎಡಿಟರ್, ಆ್ಯಪ್‌ಲಾಕ್, ಡುವಲ್ ಸ್ಪೇಸ್ ಲೈಟ್ ಸೇರಿದಂತೆ 54 ಆ್ಯಪ್‌ಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

2020ರ ಜೂನ್ 15ರಂದು ಲಡಾಖ್‌ ಗಡಿಯ ಗಾಲ್ವನ್ ಕಣಿವೆಯಲ್ಲಿ ಭಾರತ–ಚೀನಾ ಸೇನಾ ಪಡೆಗಳ ನಡುವೆ ನಡೆದಿದ್ದ ಸಂಘರ್ಷದ ಬಳಿಕ ಕೇಂದ್ರ ಸರ್ಕಾರವು ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿತ್ತು. ಪುನಃ ಅದೇ ಜುಲೈ ತಿಂಗಳಲ್ಲಿ ಟಿಕ್‌ಟಾಕ್ ಲೈಟ್, ಹೆಲೊ ಲೈಟ್, ಶೇರ್‌ಇಟ್ ಲೈಟ್, ಬಿಗೊ ಲೈವ್ ಲೈಟ್, ವಿಎಫ್‌ವೈ ಲೈಟ್ ಸೇರಿದಂತೆ ಇನ್ನೂ 47 ಚೀನಾ ಆ್ಯಪ್‌ಗಳ ಮೇಲೆ ನಿಷೇಧ ಹೇರಿತ್ತು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.