ADVERTISEMENT

India Covid-19 Update: 10,302 ಹೊಸ ಕೋವಿಡ್‌ ಪ್ರಕರಣ ದೃಢ, 267 ಸಾವು

ಪಿಟಿಐ
Published 20 ನವೆಂಬರ್ 2021, 5:36 IST
Last Updated 20 ನವೆಂಬರ್ 2021, 5:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 10,302 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 267 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,99,925ಕ್ಕೆ ಏರಿಕೆಯಾಗಿದ್ದರೆ, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 4,65,349ಕ್ಕೆ ಏರಿದೆ.

ಪ್ರಸ್ತುತ 1,24,868 ಪ್ರಕರಣಗಳು ಸಕ್ರಿಯವಾಗಿವೆ. ದೇಶದಲ್ಲಿ ಇದುವರೆಗೂ 115.79 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಪ್ರಕಟಣೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.