ADVERTISEMENT

India Covid-19 Updates: ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ, ಸಾವಿನ ಸಂಖ್ಯೆ ಏರಿಕೆ

ಪಿಟಿಐ
Published 3 ಏಪ್ರಿಲ್ 2022, 6:49 IST
Last Updated 3 ಏಪ್ರಿಲ್ 2022, 6:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 1,096 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 4,30,28,131ಕ್ಕೆ ಏರಿಕೆಯಾಗಿದೆ. ಇದೇ ವೇಳೆ 13,013 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಳಗ್ಗೆ 8ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 81 ಜನರು ಸಾವಿಗೀಡಾಗಿದ್ದು, ಈವರೆಗೆ 5,21,345 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.03ರಷ್ಟು ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಚೇತರಿಕೆ ದರ 98.76 ರಷ್ಟಿದೆ.

ADVERTISEMENT

ಕಳೆದ 24 ಗಂಟೆಗಳಲ್ಲಿ 432 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಈವರೆಗೆ 4,24,93,773 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 0.24 ರಷ್ಟಿದ್ದು, ಮರಣ ಪ್ರಮಾಣ 1.21ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 0.23 ರಷ್ಟಿದೆ.

ದೇಶದಾದ್ಯಂತ ಈವರೆಗೆ 184.66 ಕೋಟಿ ಕೋವಿಡ್-19 ಲಸಿಕಾ ಡೋಸ್‌ ಅನ್ನು ನೀಡಲಾಗಿದೆ. ಶನಿವಾರ 4,65,904 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 79.07 ಕೋಟಿ ಜನರಿಗೆ ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.