ADVERTISEMENT

India Covid Update: ಹೊಸದಾಗಿ 16,906 ಪ್ರಕರಣ ದೃಢ, ಶೇ 24ರಷ್ಟು ಹೆಚ್ಚಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜುಲೈ 2022, 4:32 IST
Last Updated 13 ಜುಲೈ 2022, 4:32 IST
ಕೋವಿಡ್
ಕೋವಿಡ್   

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,906 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಪ್ರಮಾಣ ಮಂಗಳವಾರಕ್ಕೆ ಹೋಲಿಸಿದರೆ ಶೇ 24ರಷ್ಟು ಹೆಚ್ಚಾಗಿದೆ. ಮಂಗಳವಾರದಂದು 13,615 ಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದವು.

ಈ ಅವಧಿಯಲ್ಲಿ 15,447 ಮಂದಿ ಚೇತರಿಸಿಕೊಂಡಿದ್ದು, 45 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,32,457ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ (1,414) ಹೆಚ್ಚಳ ಕಂಡುಬಂದಿದೆ.

ದೇಶದಲ್ಲಿ ಈವರೆಗೆ 4,36,69,850 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,25,519 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 3.68 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.30 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.49 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.