ADVERTISEMENT

ಕೋವಿಡ್‌: ದೇಶದಲ್ಲಿ 41,965 ಹೊಸ ಪ್ರಕರಣಗಳು ಪತ್ತೆ; ಸಕ್ರಿಯ ಪ್ರಕರಣಗಳು ಏರಿಕೆ

ಪಿಟಿಐ
Published 1 ಸೆಪ್ಟೆಂಬರ್ 2021, 5:45 IST
Last Updated 1 ಸೆಪ್ಟೆಂಬರ್ 2021, 5:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಭಾರತದಲ್ಲಿ ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 41,965 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಪೈಕಿ 30,203 ಪ್ರಕರಣಗಳು ಕೇರಳದಿಂದ ವರದಿಯಾಗಿದ್ದು ಇಲ್ಲಿ 115 ಮಂದಿ ಮೃತಪಟ್ಟಿದ್ದಾರೆ.

‘ಒಟ್ಟು ‍ಪ್ರಕರಣಗಳ ಸಂಖ್ಯೆ 3,28,10,845ಕ್ಕೆ ಏರಿಕೆ ಆಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ಹೇಳಿದೆ.

‘ಸಕ್ರಿಯ ಪ್ರಕರಣಗಳು ಕೂಡ 3,78,181ಕ್ಕೆ ಏರಿಕೆಯಾಗಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.15 ರಷ್ಟು ಪಾಲನ್ನು ಹೊಂದಿದೆ. ಇದೇ ಅವಧಿಯಲ್ಲಿ 460 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಒಟ್ಟು ಮೃತರ ಸಂಖ್ಯೆಯು 4,39,020ಕ್ಕೆ ಹೆಚ್ಚಿದೆ. ರಾಷ್ಟ್ರೀಯ ಚೇತರಿಕೆ ದರವು ಶೇಕಡ 97.51 ರಷ್ಟಿದೆ’ ಎಂದು ಸಚಿವಾಲಯವು ಹೇಳಿದೆ.

ADVERTISEMENT

‘ಮಂಗಳವಾರ 16,06,785 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 52,31,84,293 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ದೇಶದ ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 2.61 ರಷ್ಟಿದೆ. 3,19,93,644 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ದೇಶದ ಮರಣ ಪ್ರಮಾಣವು ಶೇಕಡ 1.34 ರಷ್ಟಿದೆ’ ಎಂದು ಸಚಿವಾಲಯವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.