ADVERTISEMENT

Covid 19 India Update| ಇಂದು 6,396 ಪ್ರರಕಣಗಳು ಪತ್ತೆ: 201 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 5:15 IST
Last Updated 4 ಮಾರ್ಚ್ 2022, 5:15 IST
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಪರಿಶೀಲಿಸುತ್ತಿರುವ ಸಿಬ್ಬಂದಿ (ಎಎಫ್‌ಪಿ)
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಪರಿಶೀಲಿಸುತ್ತಿರುವ ಸಿಬ್ಬಂದಿ (ಎಎಫ್‌ಪಿ)   

ನವದೆಹಲಿ: ಕಳೆದ 24 ಗಂಟೆಗಳಲ್ಲಿ 6,396 ಸೋಂಕು ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಇದೇ ವೇಳೆ 201 ಸೋಂಕಿತರು ಮೃತಪಟ್ಟಿದ್ದಾರೆ ಎಂಬುದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ.

ದೇಶದಲ್ಲಿ ಈಗ 69,897 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 4,23,67,070 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ವರೆಗೆ ಮೃತಪಟ್ಟವರ ಸಂಖ್ಯೆ 5,14,589ಕ್ಕೆ ತಲುಪಿದೆ.

ಭಾರತದ ದೈನಂದಿನ ಪಾಸಿಟಿವಿಟಿ ದರ ಶೇ 0.69 ಆಗಿದೆ.

ADVERTISEMENT

ಇನ್ನು 1,78,29,13,060 ಡೋಸ್‌ ಕೋವಿಡ್‌ ಲಸಿಕೆಗಳನ್ನು ದೇಶದಲ್ಲಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.