ADVERTISEMENT

Covid-19: ಹೊಸದಾಗಿ 7,533 ಪ್ರಕರಣ ದೃಢ, 44 ಸಾವು

ಪಿಟಿಐ
Published 28 ಏಪ್ರಿಲ್ 2023, 5:36 IST
Last Updated 28 ಏಪ್ರಿಲ್ 2023, 5:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 7,533 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 44 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 53,852ಕ್ಕೆ ಇಳಿಕೆಯಾಗಿವೆ.

ದೇಶದಲ್ಲಿ ಇದುವರೆಗೆ 4.49 ಕೋಟಿ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,31,468 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ಈವರೆಗೆ ಒಟ್ಟು 4,43,47,024 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.12 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.69 ಆಗಿದೆ.

ದೇಶದಲ್ಲಿ ಈವರೆಗೆ 220.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.