ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 795 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 4,30,29,839ಕ್ಕೆ ಏರಿಕೆಯಾಗಿದೆ. ಇದೇ ವೇಳೆ 12,054 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬೆಳಗ್ಗೆ 8ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 58 ಜನರು ಸಾವಿಗೀಡಾಗಿದ್ದು, ಈವರೆಗೆ 5,21,416 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.03ರಷ್ಟು ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಚೇತರಿಕೆ ದರ ಶೇ 98.76 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 543 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಈವರೆಗೆ 4,24,96,369 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ 0.17 ರಷ್ಟಿದ್ದು, ಮರಣ ಪ್ರಮಾಣ 1.21ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 0.22 ರಷ್ಟಿದೆ. ದೇಶದಾದ್ಯಂತ ಈವರೆಗೆ 184.87 ಕೋಟಿ ಕೋವಿಡ್-19 ಲಸಿಕಾ ಡೋಸ್ ಅನ್ನು ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.