ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 7,219 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 33 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 56,745ಕ್ಕೆ ಇಳಿಕೆಯಾಗಿದೆ.
ಕಳೆದೊಂದು ದಿನದಲ್ಲಿ 9,651 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,38,65,016 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಇದುವರೆಗೆ 4,44,49,726 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,27,965 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಲಂಡನ್ನಲ್ಲಿ ಮಂಕಿಪಾಕ್ಸ್ನ ಹೊಸ ತಳಿಪತ್ತೆ
ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 1.98 ಮತ್ತು ವಾರದ ದೃಢ ಪ್ರಮಾಣ ಶೇ 2.42 ಆಗಿದೆ.
ಒಟ್ಟು ಸೋಂಕಿತರ ಪೈಕಿ ಶೇ 0.13 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.68 ಆಗಿದೆ.
ದೇಶದಲ್ಲಿ ಈವರೆಗೆ 88.68 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 213.01 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.