ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,980 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಈವರೆಗಿನ ಒಟ್ಟು ಸಾವಿನ ಸಂಖ್ಯೆ 2,30,168 ಕ್ಕೆ ತಲುಪಿದೆ. 4,12,262 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ತಿಳಿಸಲಾಗಿದೆ.
ಹೀಗಾಗಿ, ಒಟ್ಟು ಸೋಂಕಿತರ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. 16.87 ರಷ್ಟಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 35,66,398 ಕ್ಕೆ ಏರಿದೆ. ಆದರೆ, ರಾಷ್ಟ್ರೀಯ ಕೋವಿಡ್ -19 ರೋಗಿಗಳ ಚೇತರಿಕೆ ದರವು ಶೇ. 82.03 ರಷ್ಟಿದೆ.
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,72,80,844 ಕ್ಕೆ ಏರಿದರೆ, ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ಶೇಕಡಾ 1.09 ಕ್ಕೆ ಇಳಿದಿದೆ ಎಂದು ಡೇಟಾ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.