
ಪಿಟಿಐ
ತೇಜ್‌ಪುರ (ಅಸ್ಸಾಂ): ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗಾಗಿ ದೇಶೀಯ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯ ಭದ್ರ ನೆಲೆಯನ್ನು ಸರ್ಕಾರ ಅಭಿವೃದ್ಧಿ ಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ತೇಜ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ 21ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರಗಳ ರಫ್ತು ಹೆಚ್ಚಾಗಿರುವ ಕಾರಣ ಆಮದು ಕಡಿಮೆಯಾಗಿದೆ ಎಂದಿದ್ದಾರೆ. 509 ರಕ್ಷಣಾ ಸಾಮಗ್ರಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ದೇಶಿಯವಾಗಿ ನಿರ್ಮಿಸಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.