ADVERTISEMENT

ಮಾರಿಷಸ್‌ ಪ್ರಧಾನಿ ರಾಮಗುಲಾಂ–ಮೋದಿ ಭೇಟಿ ಇಂದು

ಪಿಟಿಐ
Published 10 ಸೆಪ್ಟೆಂಬರ್ 2025, 23:06 IST
Last Updated 10 ಸೆಪ್ಟೆಂಬರ್ 2025, 23:06 IST
   

ನವದೆಹಲಿ: ಭಾರತ ಪ್ರವಾಸದಲ್ಲಿರುವ ಮಾರಿಷಸ್ ಪ್ರಧಾನಿ ನವೀನ್‌ಚಂದ್ರ ರಾಮಗುಲಾಂ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಾರಾಣಸಿಯಲ್ಲಿ ಭೇಟಿಯಾಗಲಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. 

ಉಭಯ ದೇಶಗಳ ನಡುವೆ ನಾಗರಿಕ ಮತ್ತು ಆಧ್ಯಾತ್ಮಿಕ ಸಂಬಂಧಗಳ ನಂಟಿದೆ. ಆರೋಗ್ಯ, ಶಿಕ್ಷಣ, ವಿಜ್ಞಾನ–ತಂತ್ರಜ್ಞಾನ, ಇಂಧನ, ಮೂಲಸೌಕರ್ಯ ಸೇರಿದಂತೆ ಅಭಿವೃದ್ಧಿ ಪಾಲುದಾರಿಕೆ ಬಲಪಡಿಸುವ ನಿಟ್ಟಿನಲ್ಲಿ ಎರಡೂ ದೇಶಗಳ ಮುಖಂಡರು ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ರಾಮಗುಲಾಂ ಅವರು ಸೆ.9ರಂದು ಮುಂಬೈಗೆ ಬಂದಿದ್ದು, ಸೆ.16ರವರೆಗೆ ಅವರು ಭಾರತದಲ್ಲಿ ಇರಲಿದ್ದಾರೆ. ಪ್ರಧಾನಿ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಮಾರಿಷಸ್‌ಗೆ ಭೇಟಿ ನೀಡಿದ ನಂತರ ಉಭಯ ದೇಶಗಳ ನಡುವಿನ ಸಹಕಾರ ಸಂಬಂಧಗಳಿಗೆ ಮತ್ತಷ್ಟು ಬಲ ಬಂದಿದೆ ಎಂದು
ವಿಶ್ಲೇಷಿಸಲಾಗುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.