ಹೊಲ ಹದಗೊಳಿಸುತ್ತಿರುವ ರೈತ
ಪ್ರಜಾವಾಣಿ ಚಿತ್ರ: ಸದಾಶಿವ ಎಂ.ಎಸ್
ನವದೆಹಲಿ: ದೇಶದಲ್ಲಿ ಈ ಬಾರಿಯ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಎಂದು ಹವಾಮಾನ ಇಲಾಖೆ ಮಂಗಳವಾರ ಹೇಳಿದೆ.
ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿ ಮಳೆಯ ಪ್ರಮಾಣ 87 ಸೆಂ.ಮೀ. ಇದ್ದು, ಈ ಬಾರಿ ಶೇ 105ರಷ್ಟು ಹೆಚ್ಛಳವಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಮುಖ್ಯಸ್ಥ ಮೃತ್ಯುಂಜಯ ಮೋಹಪಾತ್ರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಬಿಸಿಗಾಳಿ ಬೀಸುತ್ತಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ಬಿಸಿಗಾಳಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ನೀರಿನ ಕೊರತೆ ಎದುರಾಗಬಹುದು ಎಂದು ಇಲಾಖೆ ಹೇಳಿದೆ.
ಭಾರತದಲ್ಲಿ ಕೃಷಿ ಚಟುವಟಿಕೆಗೆ ಮುಂಗಾರಿನ ಪಾತ್ರ ಮಹತ್ವದ್ದಾಗಿದೆ. ದೇಶದ ಶೇ 42.3ರಷ್ಟು ಜನರ ಜೀವನಾಧಾರ ಇಂದಿಗೂ ಕೃಷಿಯೇ ಆಗಿದೆ. ಜಿಡಿಪಿಗೆ ಇದರ ಒಟ್ಟು ಕೊಡುಗೆ ಶೇ 18.2ರಷ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.