ADVERTISEMENT

ಭಾರತಕ್ಕೆ ಬರಲು ವಿದೇಶಿ ಪ್ರವಾಸಿಗರಿಗೆ ಅ.15ರಿಂದ ಅನುಮತಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 15:21 IST
Last Updated 7 ಅಕ್ಟೋಬರ್ 2021, 15:21 IST
ವೀಸಾ
ವೀಸಾ   

ನವದೆಹಲಿ: ಅಂತರರಾಷ್ಟ್ರೀಯ ಪ್ರವಾಸೋದ್ಯಮವನ್ನು ಪುನರಾರಂಭಿಸುವುದಾಗಿ ಕೇಂದ್ರ ಸರ್ಕಾರ ಗುರುವಾರ ಘೋಷಿಸಿದೆ. ಬಾಡಿಗೆ ವಿಮಾನಗಳ ಮೂಲಕ ಭಾರತಕ್ಕೆ ಬರುವವರಿಗೆ ಅ.15ರಿಂದ ಪ್ರವಾಸಿ ವೀಸಾ ನೀಡಲಾಗುವುದು ಎಂದು ಪ್ರಕಟಿಸಿದೆ.

‘ಇತರ ವಿಮಾನಗಳ ಮೂಲಕ ಭಾರತಕ್ಕೆ ಬರುವವರಿಗೆ ನವೆಂಬರ್‌ 15ರ ಪ್ರವಾಸಿ ವೀಸಾ ನೀಡಲಾಗುವುದು’ ಎಂದು ಗೃಹ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ ಮಾರ್ಚ್‌ನಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಿದವು. ಈ ಕಾರಣದಿಂದ ವಿದೇಶ ಪ್ರವಾಸಿಗರ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು. ಈಗ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಚಳಿಗಾಲ ಆರಂಭವಾದ ನಂತರ ವಿದೇಶಿ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತಕ್ಕೆ ಭೇಟಿ ನೀಡುತ್ತಾರೆ. ಅದರಲ್ಲೂ ಗೋವಾದ ತೀರಗಳು ವಿದೇಶಿ ಪ್ರವಾಸಿಗಳ ಆಕರ್ಷಣೀಯ ತಾಣವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.