ADVERTISEMENT

ಅಕ್ರಮ ವಲಸೆಗೆ ಭಾರತದ ವಿರೋಧವಿದೆ: ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್

ಪಿಟಿಐ
Published 25 ಜನವರಿ 2025, 3:17 IST
Last Updated 25 ಜನವರಿ 2025, 3:17 IST
<div class="paragraphs"><p>ಅಕ್ರಮ ವಲಸೆ</p></div>

ಅಕ್ರಮ ವಲಸೆ

   

ಪ್ರಾತಿನಿಧಿಕ ಚಿತ್ರ

ನವದೆಹಲಿ: ಅಕ್ರಮ ವಲಸೆಯನ್ನು ವಿರೋಧಿಸುವುದಾಗಿ ಹೇಳಿರುವ ಭಾರತ, ಅಮೆರಿಕದಲ್ಲಿ ಅಕ್ರಮವಾಗಿ ತಂಗಿರುವ ಭಾರತೀಯರನ್ನು ಹಿಂದಕ್ಕೆ ತೆಗೆದುಕೊಳ್ಳಲು ಸಿದ್ಧ ಎಂದು ತಿಳಿಸಿದೆ.

ADVERTISEMENT

ಅಮೆರಿಕದಲ್ಲಿ ನೆಲೆಸಿರುವ ಭಾರತ ಸೇರಿದಂತೆ ಇತರ ದೇಶಗಳ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಟ್ರಂಪ್ ಆಡಳಿತ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಈ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜೈಸ್ವಾಲ್, ‘ಅಮೆರಿಕ ಅಥವಾ ಬೇರೆ ಯಾವುದೇ ದೇಶದಲ್ಲಿ ದಾಖಲೆಯಿಲ್ಲದೆ ಉಳಿದುಕೊಂಡಿರುವ ಭಾರತೀಯರನ್ನು ದೇಶಕ್ಕೆ ವಾಪಸ್‌ ಕರೆಸಿಕೊಳ್ಳಲು ನಾವು ಸಿದ್ದ’ ಎಂದು ತಿಳಿಸಿದ್ದಾರೆ.

ಭಾರತದ ಸುಮಾರು18 ಸಾವಿರ ಅಕ್ರಮ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಅಮೆರಿಕದ ಹೋಮ್‌ಲ್ಯಾಂಡ್ ಭದ್ರತಾ ಇಲಾಖೆ ಗುರುತಿಸಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಕ್ರಮ ವಲಸೆಯು ಹಲವು ರೀತಿಯ ಸಂಘಟಿತ ಅಪರಾಧಗಳೊಂದಿಗೆ ಸಂಪರ್ಕ ಹೊಂದಿರುವುದರಿಂದ ಭಾರತವು ಅಕ್ರಮ ವಲಸೆಯನ್ನು ಬಲವಾಗಿ ವಿರೋಧಿಸುತ್ತದೆ’ ಎಂದಿದ್ದಾರೆ.

‘ನಮ್ಮೊಂದಿಗೆ ದಾಖಲೆಗಳನ್ನು ಹಂಚಿಕೊಂಡರೆ ಅವರ(ಅಕ್ರಮ ವಲಸಿಗರ) ರಾಷ್ಟ್ರೀಯತೆಯನ್ನು ಪರಿಶೀಲಿಸಿ, ನಿಜವಾಗಿಯೂ ಭಾರತೀಯರಾದರೆ ಅವರನ್ನು ಹಿಂದಕ್ಕೆ ಕರೆಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಜನವರಿ 20ರಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್‌, ದಾಖಲೆಗಳಿಲ್ಲದೇ ಅಮೆರಿಕದಲ್ಲಿ ವಾಸಿಸುತ್ತಿರುವವರನ್ನು ಸ್ವದೇಶಕ್ಕೆ ಮರಳಿಸುವಂತೆ ಸರ್ಕಾರಿ ಏಜೆನ್ಸಿಗಳಿಗೆ ಆದೇಶಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.