ADVERTISEMENT

ಗಡಿಯಲ್ಲಿ ಸತತ 4ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ಪ್ರತ್ಯುತ್ತರ

ಪಿಟಿಐ
Published 28 ಏಪ್ರಿಲ್ 2025, 4:19 IST
Last Updated 28 ಏಪ್ರಿಲ್ 2025, 4:19 IST
<div class="paragraphs"><p>ಗಡಿ ನಿಯಂತ್ರಣ ರೇಖೆ</p></div>

ಗಡಿ ನಿಯಂತ್ರಣ ರೇಖೆ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮ ನಿಯಮ ಉಲ್ಲಂಘಿಸಿರುವ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಅಧಿಕಾರಿಗಳು ಇಂದು (ಸೋಮವಾರ) ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಇದರೊಂದಿಗೆ ಸತತ ನಾಲ್ಕನೇ ದಿನದ ರಾತ್ರಿಯಲ್ಲೂ ಪಾಕ್‌ನಿಂದ ಕದನ ವಿರಾಮ ನಿಯಮ ಉಲ್ಲಂಘನೆಯಾಗಿದೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪದೇ ಪದೇ ಕದನ ವಿರಾಮ ನಿಯಮ ಉಲ್ಲಂಘಿಸುತ್ತಿರುವ ಪಾಕ್ ಸೇನೆಯ ವಿರುದ್ಧ ಸಂಘರ್ಷ ಮುಂದುವರಿದಿದೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.