ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್‌ಗೆ ಹೊಂದಿಕೊಂಡಿರುವ ಭಾರತ–ಪಾಕಿಸ್ತಾನ ಗಡಿಯಲ್ಲಿ ಮಂಗಳವಾರ ರಾತ್ರಿಯಿಂದ ಡ್ರೋನ್ ಹಾರಾಟ ಸೇರಿದಂತೆ ಯಾವುದೇ ದಾಳಿ ನಡೆದಿಲ್ಲ.
ಈ ಬಗ್ಗೆ ರಕ್ಷಣಾ ಇಲಾಖೆ ವಕ್ತಾರರು ಹೇಳಿದ್ದಾರೆ.
ಡ್ರೋನ್ ಹಾರಾಟ ಅಥವಾ ದಾಳಿ, ಶೆಲ್ ಅಥವಾ ರಾಕೆಟ್ ದಾಳಿ, ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕ್ ಕಡೆಯಿಂದ ಗುಂಡಿನ ಚಕಮಕಿ ನಡೆದಿಲ್ಲ. ಗಡಿ ಪ್ರದೇಶಗಳು ಶಾಂತವಾಗಿದ್ದು ಜನಜೀವನ ಸಹಜವಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ನಿನ್ನೆ ಗಡಿ ಜಿಲ್ಲೆಗಳನ್ನು ಹೊರತುಪಡಿಸಿ ಜಮ್ಮು– ಕಾಶ್ಮೀರದ ಉಳಿದೆಡೆ ಶಾಲಾ– ಕಾಲೇಜುಗಳು ಪುನರಾರಂಭಗೊಂಡಿದ್ದವು. ಮಂಗಳವಾರ ಗಡಿ ಭಾಗದ ಜಿಲ್ಲೆಗಳಲ್ಲಿರುವ ಶಾಲಾ– ಕಾಲೇಜುಗಳು ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿ ಲಷ್ಕರ್-ಎ–ತಯಬಾ ಭಯೋತ್ಪಾದಕ ಸಂಘಟನೆಯ ಮೂವರು ಉಗ್ರರನ್ನು ಮಂಗಳವಾರ ಹತ್ಯೆ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.