ADVERTISEMENT

Indo-Pak Tension: ಭಾರತ– ಪಾಕ್‌ ಕದನ ವಿರಾಮ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮೇ 2025, 12:35 IST
Last Updated 10 ಮೇ 2025, 12:35 IST
   

ನವದೆಹಲಿ: ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದರು.

‘ಇದರನ್ವಯ ಎರಡು ಕಡೆಗೆ ಸೂಚನೆಗಳನ್ನು ನೀಡಲಾಗಿದೆ. ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.