ಭಾರತ ಮತ್ತು ಪಾಕಿಸ್ತಾನ
ಐಸ್ಟೋಕ್ ಸಂಗ್ರಹ ಚಿತ್ರ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಸೇನಾ ಜನರಲ್‌ಗಳು (ಡಿಜಿಎಂಒ) ಪಾಲ್ಗೊಂಡ ಇಂದಿನ ಸಭೆ ಮುಕ್ತಾಯವಾಗಿದೆ.
ಹಾಟ್‌ಲೈನ್ ಮೂಲಕ ನಡೆದಿದೆ. ಸಭೆಯಲ್ಲಿ ಏನೆಲ್ಲ ಬಗ್ಗೆ ಚರ್ಚೆಯಾಗಿದೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.
ಸಭೆಯು ಮಧ್ಯಾಹ್ನ 12ಕ್ಕೆ ನಿಗದಿಯಾಗಿತ್ತು. ಆದರೆ ಮುಂದೂಡಲಾಗಿತ್ತು.
ಜಮ್ಮು ಮತ್ತು ಕಾಶ್ಮಿರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್ 22ರಂದು ಗುಂಡಿನ ದಾಳಿ ನಡೆಸಿದ್ದರು.
ಅದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಉಗ್ರರ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಗಳಲ್ಲಿ (ಮೇ 7ರಂದು) 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿದ್ದವು. ಇದರ ಬೆನ್ನಲ್ಲೇ, ಪಾಕಿಸ್ತಾನ ಪಡೆಗಳು ಭಾರತದ ನಾಗರಿಕರು ಮತ್ತು ಸೇನಾ ನೆಲೆಗಳನ್ನು ಗರಿಯಾಗಿಸಿ ಗಡಿಯುದ್ದಕ್ಕೂ ನಡೆಸಿದ್ದ ದಾಳಿಗಳನ್ನು ಭಾರತೀಯ ಸೇನೆ ಸಮರ್ಥವಾಗಿ ಹಿಮ್ಮೆಟ್ಟಿಸಿದ್ದವು.
ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ, ಶನಿವಾರ (ಮೇ 10ರಂದು) ಕದನ ವಿರಾಮ ಒಪ್ಪಂದಕ್ಕೆ ಬರಲಾಗಿದೆ. ಈ ವಿಚಾರವಾಗಿ ಸೇನಾಧಿಕಾರಿಗಳ ಸಭೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.