ಸಿದ್ದರಾಮಯ್ಯ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸ್ವಾಗತಿಸಿದ್ದಾರೆ.
ಶನಿವಾರ ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದರು.
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕದನ ವಿರಾಮದ ನಡೆಯನ್ನು ಸ್ವಾಗತಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡಣವೀಸ್, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲಾ ಸೇರಿ ಹಲವರು ಉಭಯ ದೇಶಗಳ ನಡೆಯನ್ನು ಸ್ವಾಗತಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.