ಜೈರಾಮ್ ರಮೇಶ್
ಪಿಟಿಐ ಚಿತ್ರ
ನವದೆಹಲಿ: ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ಮತ್ತು ಭಾರತ, ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಹಾಗೂ ಸಂಸತ್ ವಿಶೇಷ ಅಧಿವೇಶನ ನಡೆಸುವಂತೆ ಕಾಂಗ್ರೆಸ್ ಭಾನುವಾರ ಆಗ್ರಹಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದ ಬಗ್ಗೆ ಚರ್ಚಿಸಲು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಟಸ್ಠ ವೇದಿಕೆಯ ಬಗ್ಗೆ ಹೇಳಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕುತ್ತದೆ. ಹಾಗಾದರೆ ಮೂರನೇ ವ್ಯಕ್ತಿಗಳಿಗೆ ಮಧ್ಯಸ್ಥಿಕೆ ವಹಿಸಲು ಬಾಗಿಲು ತೆರೆದಿದೆಯೇ, ಶಿಮ್ಲಾ ಒಪ್ಪಂದವನ್ನು ಮುರಿಯಲಾಗಿದೆಯೇ, ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಮಾರ್ಗ ತೆರೆಯಲಿದೆಯೇ, ಯಾವ ಬದ್ಧತೆಯನ್ನು ಬಯಸಿದ್ದೆವು, ಯಾವುದನ್ನು ಪಡೆಯುತ್ತಿದ್ದೇವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.