ADVERTISEMENT

ಭಾರತ–ಪಾಕ್ ಉದ್ವಿಗ್ನ ಪರಿಸ್ಥಿತಿ: ರಾಜಸ್ಥಾನದಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ

ಪಿಟಿಐ
Published 9 ಮೇ 2025, 10:37 IST
Last Updated 9 ಮೇ 2025, 10:37 IST
   

ಜೈಪುರ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಹೆಚ್ಚಾಗುತ್ತಿದ್ದು, ವಾಯುವ್ಯ ರೈಲ್ವೆ ವಿಭಾಗವು ಇಂದು ರಾಜಸ್ಥಾನದಲ್ಲಿ ನಾಲ್ಕು ರೈಲುಗಳನ್ನು ರದ್ದುಗೊಳಿಸಿದೆ. ಇನ್ನೂ ಐದು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಿದೆ.

ಪಾಕ್‌ ಗಡಿಯಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ, ಮುಂಜಾಗ್ರತ ಕ್ರಮವಾಗಿ ಅಂತರರಾಷ್ಟ್ರೀಯ ಗಡಿಗೆ ಹೊಂದಿಕೊಂಡ ರಾಜಸ್ಥಾನದ ಮುನಾಬಾವೊಗೆ ತೆರಳಬೇಕಿದ್ದ ಹಾಗೂ ಅಲ್ಲಿಂದ ತೆರಳುವ ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ವಾಯುವ್ಯ ರೈಲ್ವೆ ವಿಭಾಗದ ಸಿ.ಪಿ.ಆರ್‌ಓ. ಶಶಿ ಕಿರಣ್ ಮಾಹಿತಿ ನೀಡಿದ್ದಾರೆ.

ಪ್ರಯಾಣಕ್ಕೂ ಮುನ್ನ ರೈಲ್ವೆ ವೆಬ್‌ಸೈಟ್ ಅಥವಾ ಸಹಾಯವಾಣಿಯ ಮೂಲಕ ಮಾಹಿತಿ ಪಡೆಯುವಂತೆ ಮನವಿ ಮಾಡಿದ್ದಾರೆ.

ADVERTISEMENT

ಪಾಕಿಸ್ತಾನದಿಂದ ವಾಯುದಾಳಿಯ ಸಂಭಾವನೀಯತೆಯಿದ್ದ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜೈಸಲ್ಮೇರ್‌ ಹಾಗೂ ಜೋಧ್‌ಪುರದ ಪ್ರಮುಖ ಮೂಲಸೌಕರ್ಯಗಳನ್ನು ಬ್ಲ್ಯಾಕ್ಔಟ್ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.