ADVERTISEMENT

ಅಲ್ಪಸಂಖ್ಯಾತರಿಗೆ ಕಿರುಕುಳ ಆರೋಪ: ಪಾಕಿಸ್ತಾನದ ಹೇಳಿಕೆಗೆ ಭಾರತ ಖಂಡನೆ

ಪಿಟಿಐ
Published 30 ಡಿಸೆಂಬರ್ 2025, 4:05 IST
Last Updated 30 ಡಿಸೆಂಬರ್ 2025, 4:05 IST
ರಣಧೀರ್‌ ಜೈಸ್ವಾಲ್‌
ರಣಧೀರ್‌ ಜೈಸ್ವಾಲ್‌   

ನವದೆಹಲಿ: ‘ಪಾಕಿಸ್ತಾನವು ವಿವಿಧ ಧರ್ಮಗಳ ಅಲ್ಪಸಂಖ್ಯಾತರ ಮೇಲೆ ಭಯಾನಕ ಮತ್ತು ವ್ಯವಸ್ಥಿತವಾಗಿ ದೌರ್ಜನ್ಯ ನಡೆಸುತ್ತಿರುವುದು ಸಾಬೀತಾಗಿರುವ ಸತ್ಯವಾಗಿದೆ. ಅದು ಬೇರೆಯವರತ್ತ ಬೆರಳು ತೋರಿಸಿ ವಾಸ್ತವಾಂಶವನ್ನು ಮರೆಮಾಚಲು ಸಾಧ್ಯವಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಸೋಮವಾರ ಹೇಳಿದ್ದಾರೆ.

ಭಾರತದ ಕೆಲವೆಡೆ ಕ್ರಿಸ್‌ಮಸ್‌ ಆಚರಣೆ ಸಂದರ್ಭದಲ್ಲಿ ನಡೆದಿದ್ದ ವಿಧ್ವಂಸಕ ಕೃತ್ಯಗಳ ಕುರಿತು ಇಸ್ಲಾಮಾಬಾದ್‌ನಲ್ಲಿ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್‌ ಅಂದ್ರಾಬಿ, ‘ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತೀವ್ರ ಕಳವಳಕಾರಿ ವಿಷಯವಾಗಿದೆ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT