ವಿಕ್ರಮ್ ಮಿಸ್ರಿ
ನವದೆಹಲಿ: ಪಾಕಿಸ್ತಾನದೊಂದಿಗಿನ ಪರಿಸ್ಥಿತಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು(ಸೋಮವಾರ) ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ.
ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ ಮೇ 7ರಂದು ಭಾರತ 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಸೇನಾ ಕಾರ್ಯಾಚರಣೆ ನಡೆಸಿತ್ತು. ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮೇ 10ರಂದು ಎರಡೂ ದೇಶಗಳು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಒಪ್ಪಿಗೆ ಸೂಚಿಸಿವೆ. ಆ ನಂತರ ನಡೆದ ಬೆಳವಣಿಗೆಗಳ ಕುರಿತು ಮಿಸ್ರಿ ಸೋಮವಾರ (ಮೇ 19) ಸಮಿತಿಗೆ ವಿವರಣೆ ನೀಡಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ.
ಬಾಂಗ್ಲಾದೇಶ ಸೇರಿ ನೆರೆಹೊರೆಯ ದೇಶಗಳಲ್ಲಿನ ಬೆಳವಣಿಗೆಗಳು ಮತ್ತು ಕೆನಡಾದೊಂದಿಗಿನ ಸಂಬಂಧಗಳು ಸೇರಿದಂತೆ ವಿದೇಶಾಂಗ ವ್ಯವಹಾರಗಳ ಹಲವಾರು ವಿಷಯಗಳ ಕುರಿತು ಮಿಸ್ರಿ ನಿಯಮಿತವಾಗಿ ಈ ಸಮಿತಿಗೆ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.