ADVERTISEMENT

ಸೋಂಕು ಹೆಚ್ಚಳ: ಕೋವಿಡ್ ಲಸಿಕೆ ಮೇಲಿನ ಆಮದು ಶುಲ್ಕ ರದ್ದುಪಡಿಸಲಿದೆ ಭಾರತ

ರಾಯಿಟರ್ಸ್
Published 20 ಏಪ್ರಿಲ್ 2021, 1:44 IST
Last Updated 20 ಏಪ್ರಿಲ್ 2021, 1:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೋವಿಡ್ ಪ್ರಕರಣಗಳನ್ನು ಹತ್ತಿಕ್ಕಲು ಕೈಗೊಂಡಿರುವ ವಿವಿಧ ಕ್ರಮಗಳಿಗೆ ಅನುಗುಣವಾಗಿ, ಭಾರತವು ವಿದೇಶದಿಂದ ಆಮದು ಮಾಡಿಕೊಳ್ಳುವ ಕೋವಿಡ್-19 ಲಸಿಕೆ ಮೇಲಿನ ಶೇ 10ರಷ್ಟು ಆಮದು ಶುಲ್ಕವನ್ನು ತೆಗೆದುಹಾಕಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಷ್ಯಾದಿಂದ ಶೀಘ್ರದಲ್ಲೇ ಸ್ಪುಟ್ನಿಕ್–ವಿ ಲಸಿಕೆ ದೇಶಕ್ಕೆ ಬರಲಿದೆ. ಅಲ್ಲದೆ ಫೈಜರ್, ಮಾಡರ್ನಾ ಮತ್ತು ಜಾನ್ಸನ್ ಆಂಡ್ ಜಾನ್ಸನ್ ಲಸಿಕೆಗಳನ್ನು ಕೂಡಾ ಆಮದು ಮಾಡಿ ಬಳಸಿಕೊಳ್ಳುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು, ಸರ್ಕಾರದ ಮಧ್ಯಪ್ರವೇಶವಿಲ್ಲದೆಯೇ, ಈಗಾಗಲೇ ಅನುಮತಿ ಪಡೆದುಕೊಂಡಿರುವ ಲಸಿಕೆಯನ್ನು ದೇಶದಲ್ಲಿ ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಿದೆ. ಅಲ್ಲದೆ, ಬೆಲೆ ನಿಗದಿಪಡಿಸುವ ಸ್ವಾತಂತ್ರ್ಯವನ್ನು ಕೂಡ ನೀಡಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಸ್ತುತ ದೇಶದಲ್ಲಿ ಕೋವಿಡ್ 19 ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ನಿಯಂತ್ರಿಸುತ್ತಿದೆ. ಈ ಕುರಿತಂತೆ ಹಣಕಾಸು ಸಚಿವಾಲಯದ ವಕ್ತಾರರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಈಗಾಗಲೇ ನೇಪಾಳ, ಪಾಕಿಸ್ತಾನ, ಅರ್ಜೆಂಟಿನಾ ಮತ್ತು ಬ್ರೆಜಿಲ್ ಲಸಿಕೆ ಆಮದಿಗೆ ಶೇ 10ರಿಂದ 20 ಶುಲ್ಕ ವಿಧಿಸುತ್ತಿವೆ.

ದೇಶದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 2,73,810 ಹೊಸ ಪ್ರಕರಣ ವರದಿಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 1,50,61,919ಕ್ಕೆ ಏರಿದೆ. ಅಲ್ಲದೆ, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 1,78,769ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.