ADVERTISEMENT

ರಷ್ಯಾ ಅಧ್ಯಕ್ಷ ಪುಟಿನ್ ಜತೆ ಮೋದಿ ದೂರವಾಣಿ ಮಾತುಕತೆ: ಯುದ್ಧ ಕೊನೆಗೊಳಿಸಲು ಮನವಿ

ರಷ್ಯಾ ಅಧ್ಯಕ್ಷ ಪುಟಿನ್ ಜತೆ ದೂರವಾಣಿ ಮೂಲಕ ಮಾತುಕತೆ

ಏಜೆನ್ಸೀಸ್
Published 24 ಫೆಬ್ರುವರಿ 2022, 19:45 IST
Last Updated 24 ಫೆಬ್ರುವರಿ 2022, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉಕ್ರೇನ್ ಬಿಕ್ಕಟ್ಟು ಕುರಿತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಮಾತನಾಡಿದ್ದು, ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

‘ಯುದ್ಧವನ್ನು ತಕ್ಷಣವೇ ನಿಲ್ಲಿಸುವಂತೆ ಮೋದಿ ಅವರು ಮನವಿ ಮಾಡಿದ್ದಾರೆ. ರಾಜತಾಂತ್ರಿಕ ಮಾತುಕತೆಗಳು ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ. ರಷ್ಯಾ ಮತ್ತು ನ್ಯಾಟೊ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಮ್ಮ ಹಿಂದಿನ ಹೇಳಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ’ ಎಂದು ಹೇಳಿಕೆ ತಿಳಿಸಿದೆ.

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀರನ್ನು ಮರಳಿ ಕರೆತರುವುದಕ್ಕೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಚರ್ಚಿಸಿದರು ಎಂದು ಹೇಳಿಕೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.