ನವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,313 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ.
ಬುಧವಾರಕ್ಕೆ (12,249) ಹೋಲಿಸಿದರೆ ಕೋವಿಡ್ ಪ್ರಕರಣ ಏರಿಕೆಯಾಗಿವೆ.
ಸಕ್ರಿಯ ಪ್ರಕರಣಗಳ ಸಂಖ್ಯೆಗಳಲ್ಲಿ (2,303) ಹೆಚ್ಚಳ ಉಂಟಾಗಿದ್ದು, 83,990ಕ್ಕೆ ತಲುಪಿದೆ.
ಈ ಅವಧಿಯಲ್ಲಿ 38 ಮಂದಿ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,24,941 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 4,33,44,958 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.