ADVERTISEMENT

India Covid Updates: ಹೊಸದಾಗಿ 1,590 ಪ್ರಕರಣಗಳು ದೃಢ

ಪಿಟಿಐ
Published 25 ಮಾರ್ಚ್ 2023, 9:26 IST
Last Updated 25 ಮಾರ್ಚ್ 2023, 9:26 IST
   

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ.

ಕಳೆದ 146 ದಿನಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಇದೇ ಅವಧಿಯಲ್ಲಿ 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಮೂವರು, ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,824ಕ್ಕೆ ಏರಿದೆ.

ADVERTISEMENT

ದೈನಂದಿನ ಪಾಸಿಟಿವಿಟ ದರ ಶೇಕಡ 1.33ರಷ್ಟಿದ್ದು, ವಾರದ ಪಾಸಿಟಿವಿಟ ದರ ಶೇಕಡ ಶೇಕಡ 1.23ರಷ್ಟಾಗಿದೆ.

ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4,47,02,257ರಷ್ಟಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.