ADVERTISEMENT

Covid-19 India Update| ದೇಶದಲ್ಲಿ 42,618 ಸೋಂಕು ಪ್ರಕರಣಗಳು ಪತ್ತೆ

ಪಿಟಿಐ
Published 4 ಸೆಪ್ಟೆಂಬರ್ 2021, 5:11 IST
Last Updated 4 ಸೆಪ್ಟೆಂಬರ್ 2021, 5:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಹೊಸದಾಗಿ 42,618 ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರಒಟ್ಟು ಸಂಖ್ಯೆ ‌3,29,45,907ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಮೂರು ದಿನಗಳಿಂದ ಸತತವಾಗಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ ಒಂದೇ ದಿನ 5,903 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಪ್ರಸ್ತುತ ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ರಷ್ಟಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 1.23ರಷ್ಟಿದೆ. ಗುಣಮುಖರಾಗುತ್ತಿರುವವರ ಪ್ರಮಾಣ ಶೇ 97.43ರಷ್ಟಿದೆ.

ಕೋವಿಡ್‌ನಿಂದಾಗಿ ನಿನ್ನೆ 330 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿನಿಂದ ಸತ್ತವರ ಸಂಖ್ಯೆ 4,40,225ಕ್ಕೆ ಏರಿದೆ.

ADVERTISEMENT

ಪ್ರತಿ ದಿನದ ಪಾಸಿಟಿವಿಟಿ ದರ ಶೇ 2.50ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 2.63ರಷ್ಟಿದೆ. ಕಳೆದ 71 ದಿನಗಳಿಂದ ಪಾಸಿಟಿವಿಟಿ ದರ ಶೇ 3ಕ್ಕಿಂತ ಕಡಿಮೆ ಇದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.