ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,575 ಹೊಸಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 145 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,29,75,883 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,15,355 ಮಂದಿ ಸಾವಿಗೀಡಾಗಿದ್ದಾರೆ.
ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,24,13,566 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 46,962 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಇದುವರೆಗೆ 1,79ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.
ಸದ್ಯ ಕೇರಳದಲ್ಲಿ 13,493, ಮಹಾರಾಷ್ಟ್ರದಲ್ಲಿ 7,212, ಕರ್ನಾಟಕದಲ್ಲಿ 3,018, ತಮಿಳುನಾಡಿನಲ್ಲಿ 2,145 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.