ADVERTISEMENT

India Covid Update: ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಪ್ರಕರಣ, 29 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಏಪ್ರಿಲ್ 2023, 4:41 IST
Last Updated 26 ಏಪ್ರಿಲ್ 2023, 4:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಹೊಸದಾಗಿ 9,629 ಕೋವಿಡ್‌ ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 61,013ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕೇರಳದಲ್ಲಿ 9, ದೆಹಲಿಯಲ್ಲಿ 6, ಮಹಾರಾಷ್ಟ್ರ ಮತ್ತು ರಾಜಸ್ಥಾನ ತಲಾ 3, ಹರಿಯಾಣ ಮತ್ತು ಉತ್ತರಪ್ರದೇಶದಲ್ಲಿ ತಲಾ 2 ಮಂದಿ ಸೇರಿದಂತೆ ಕೋವಿಡ್‌ನಿಂದ ಒಂದೇ ದಿನ 29 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 5,31,398ಕ್ಕೆ ಏರಿಕೆಯಾಗಿದೆ.

ಈವರೆಗೆ ಒಟ್ಟು 4,49,05,827 ಮಂದಿ ಕೋವಿಡ್‌ಗೆ ಒಳಗಾಗಿದ್ದು, 4,43,23,045 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 0.14ರಷ್ಟಿದ್ದು, ಚೇತರಿಕೆ ಪ್ರಮಾಣ 98.68ರಷ್ಟು ಇದೆ. ಸಾವಿನ ಪ್ರಮಾಣ ಶೇ 1.18ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರ ದೇಶದಲ್ಲಿ 6,690 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 24 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.