ADVERTISEMENT

India Covid Updates: ಹೊಸದಾಗಿ 16,047 ಪ್ರಕರಣಗಳು ದೃಢ

ಪಿಟಿಐ
Published 10 ಆಗಸ್ಟ್ 2022, 5:13 IST
Last Updated 10 ಆಗಸ್ಟ್ 2022, 5:13 IST
   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 16,047 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದೇ ಅವಧಿಯಲ್ಲಿ 54 ಮಂದಿ ಮೃತಪಟ್ಟಿದ್ದಾರೆ.

ಹೀಗಾಗಿ, ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4,41,90,697ಕ್ಕೆ ಏರಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 5,26,826ಕ್ಕೆ ಜಿಗಿದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,28,261ರಷ್ಟಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.52 ರಷ್ಟಾಗಿದೆ.

ADVERTISEMENT

ಕೋವಿಡ್‌ನಿಂದ ಮರಣ ಪ್ರಮಾಣ ಶೇಕಡ 1.19 ರಷ್ಟಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 4.94 ಮತ್ತು ವಾರದ ಪಾಸಿಟಿವಿಟಿ ದರ ಶೇಕಡ 4.90 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.