ADVERTISEMENT

Covid-19 India Update: 36,571 ಹೊಸ ಪ್ರಕರಣ, 540 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಆಗಸ್ಟ್ 2021, 5:00 IST
Last Updated 20 ಆಗಸ್ಟ್ 2021, 5:00 IST
ಅಸ್ಸಾಂನಲ್ಲಿ ಕೋವಿಡ್‌ ಲಸಿಕೆ ಪಡೆಯಲು ಸಾಲುಗಟ್ಟಿ ನಿಂತಿರುವ ಜನ –ಪಿಟಿಐ ಚಿತ್ರ
ಅಸ್ಸಾಂನಲ್ಲಿ ಕೋವಿಡ್‌ ಲಸಿಕೆ ಪಡೆಯಲು ಸಾಲುಗಟ್ಟಿ ನಿಂತಿರುವ ಜನ –ಪಿಟಿಐ ಚಿತ್ರ   

ನವದೆಹಲಿ: ದೇಶದಾದ್ಯಂತ ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ 36,571 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 540 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,23,58,829 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,33,589 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 3,31,561,635 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,63,605 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 1,79,835, ಮಹಾರಾಷ್ಟ್ರದಲ್ಲಿ 61,082, ಕರ್ನಾಟಕದಲ್ಲಿ 21,159, ತಮಿಳುನಾಡಿನಲ್ಲಿ 19,864, ಆಂಧ್ರಪ್ರದೇಶ 15,738 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.