ADVERTISEMENT

Covid-19 India Update: ದೇಶದಾದ್ಯಂತ 1.35 ಲಕ್ಷ ಕೋವಿಡ್‌ ಪ್ರಕರಣಗಳು ಸಕ್ರಿಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ನವೆಂಬರ್ 2021, 4:43 IST
Last Updated 14 ನವೆಂಬರ್ 2021, 4:43 IST
ಮಹಾರಾಷ್ಟ್ರದ ಕರಾಡ್‌ನಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್‌ ಲಸಿಕೆ ಹಾಕುತ್ತಿರುವುದು
ಮಹಾರಾಷ್ಟ್ರದ ಕರಾಡ್‌ನಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್‌ ಲಸಿಕೆ ಹಾಕುತ್ತಿರುವುದು   

ನವದೆಹಲಿ: ದೇಶದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 11,271 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 11,376 ಮಂದಿ ಗುಣಮುಖರಾಗಿದ್ದರೆ, ಸೋಂಕಿನಿಂದ 285 ಜನ ಸಾವಿಗೀಡಾಗಿದ್ದಾರೆ.

ಒಟ್ಟು ಕೋವಿಡ್‌ ದೃಢ ಪ್ರಕರಣಗಳ ಸಂಖ್ಯೆ 3,44,37,307 ತಲುಪಿದ್ದು, ಈ ಪೈಕಿ ಪ್ರಸ್ತುತ 1,35,918 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೂ ಕೋವಿಡ್‌ ಕಾರಣಗಳಿಂದಾಗಿ ದೇಶದಾದ್ಯಂತ 4,63,530 ಮಂದಿ ಮೃತಪಟ್ಟಿದ್ದಾರೆ ಹಾಗೂ 3,38,37,859 ಜನ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಕೇರಳದಲ್ಲಿ ಶನಿವಾರ ರಾತ್ರಿ ವರೆಗೂ ಕೋವಿಡ್‌ ದೃಢಪಟ್ಟ 6,468 ಹೊಸ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಇದುವರೆಗೂ 112.01 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ.

ADVERTISEMENT

ಜಾನ್‌ ಹಾಪ್ಕಿನ್ಸ್‌ ಯೂನಿವರ್ಸಿಟಿ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ 25.29 ಕೋಟಿಗೂ ಅಧಿಕ ಕೋವಿಡ್‌ ದೃಢಪಟ್ಟ ಪ್ರಕರಣಗಳು ವರದಿಯಾಗಿವೆ. 50.95 ಲಕ್ಷಕ್ಕೂ ಹೆಚ್ಚು ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಜಾಗತಿಕವಾಗಿ 744.14 ಕೋಟಿಗೂ ಹೆಚ್ಚು ಡೋಸ್‌ ಲಸಿಕೆ ವಿತರಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.