ADVERTISEMENT

Covid-19 India Update: ಸೋಂಕಿನ ಪ್ರಮಾಣ ಗಣನೀಯ ಇಳಿಕೆ

ಏಜೆನ್ಸೀಸ್
Published 28 ಜನವರಿ 2021, 14:58 IST
Last Updated 28 ಜನವರಿ 2021, 14:58 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ
ಕೊರೊನಾ ವೈರಸ್‌ ಸೋಂಕು ಪರೀಕ್ಷೆ   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಶೇ 0.46 ಸೋಂಕಿತರು ಮಾತ್ರ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

146 ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ, ಶೇ 2.20 ಜನರು ಐಸಿಯುನಲ್ಲಿ ಹಾಗೂ ಶೇ 3.02 ಜನರಿಗೆ ಕೃತಕ ಆಮ್ಲಜನಕ ಅಳವಡಿಸಲಾಗಿದೆ ಆರೋಗ್ಯ ಸಚಿವ ಹರ್ಷವರ್ಧನ್‌ ತಿಳಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ 12 ಲಕ್ಷ ಪರೀಕ್ಷೆಗಳು ನಡೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 12 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.73 ಲಕ್ಷಕ್ಕೆ ಇಳಿಕೆಯಾಗಿದೆ.

ADVERTISEMENT

ಬ್ರಿಟನ್‌ನಲ್ಲಿ ಮೊದಲು ಕಾಣಿಸಿಕೊಂಡ ರೂಪಾಂತರಗೊಂಡ ವೈರಾಣು ದೇಶದಲ್ಲಿ 165 ಜನರಲ್ಲಿ ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್‌ ಮಾಡಲಾಗಿದೆ’ ಎಂದರು.

ಕೋವಿಡ್‌ ಲಸಿಕೆ ಅಭಿಯಾನ ಈಗಾಗಲೇ ಮುಂದುವರಿದಿದ್ದು, ಈವರೆಗೆ 23,55,979 ಮಂದಿ ಲಸಿಕೆ ಪಡೆದಿದ್ದಾರೆ. ಸದ್ಯ ಕೇರಳದಲ್ಲಿ 72,476, ಮಹಾರಾಷ್ಟ್ರದಲ್ಲಿ 44,624, ಕರ್ನಾಟಕದಲ್ಲಿ 6,317 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.