ADVERTISEMENT

Covid-19 India Update: 12 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 92 ಮಂದಿ ಸಾವು

ಏಜೆನ್ಸೀಸ್
Published 14 ಫೆಬ್ರುವರಿ 2021, 6:43 IST
Last Updated 14 ಫೆಬ್ರುವರಿ 2021, 6:43 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 12,194 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 92 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,09,04,940 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,55,642 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,06,11,731 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,37,567 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 63,847, ಮಹಾರಾಷ್ಟ್ರದಲ್ಲಿ 34,449, ಕರ್ನಾಟಕದಲ್ಲಿ 5,929, ತಮಿಳುನಾಡಿನಲ್ಲಿ 4,275, ಪಶ್ಚಿಮ ಬಂಗಾಳದಲ್ಲಿ 4,160 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಇದುವರೆಗೆ 82,63,858 ಮಂದಿ ಕೋವಿಡ್‌ ಲಸಿಕೆಯನ್ನು ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.