ADVERTISEMENT

Covid India Update | 12 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 15 ಮಂದಿ ಸಾವು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜೂನ್ 2022, 4:56 IST
Last Updated 19 ಜೂನ್ 2022, 4:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 12,899 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,32,96,692 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,855 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,26,99,363 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 72,474 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.60 ರಷ್ಟಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 22,828, ಕೇರಳದಲ್ಲಿ 21,275, ದೆಹಲಿಯಲ್ಲಿ 5,119, ಕರ್ನಾಟಕದಲ್ಲಿ 4,825, ತಮಿಳುನಾಡಿನಲ್ಲಿ 3,073, ಹರಿಯಾಣದಲ್ಲಿ 2,945, ಉತ್ತರ ಪ್ರದೇಶದಲ್ಲಿ 2,323 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 196.14 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.