ADVERTISEMENT

Covid India Update| ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜುಲೈ 2022, 4:50 IST
Last Updated 5 ಜುಲೈ 2022, 4:50 IST
ಜಮ್ಮುವಿನಲ್ಲಿ ಮಹಿಳೆಯೊಬ್ಬರು ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವುದು (ಪಿಟಿಐ)
ಜಮ್ಮುವಿನಲ್ಲಿ ಮಹಿಳೆಯೊಬ್ಬರು ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವುದು (ಪಿಟಿಐ)   

ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 13,086 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ.

ಇದೇ ಅವಧಿಯಲ್ಲಿ 12,456 ಮಂದಿ ಚೇತರಿಕೆ ಕಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈ ವರೆಗೆ 5,25,242 ಮಂದಿ ಕೋವಿಡ್‌ನಿಂದಾಗ ಮೃತಪಟ್ಟಿದ್ದಾರೆ.

ADVERTISEMENT

ಸದ್ಯ ದೇಶದಲ್ಲಿ1,14,475 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 2.90ಕ್ಕೆ ಇಳಿದಿದೆ.

ಸೋಮವಾರ 16,135 ಪ್ರಕರಣಗಳು ಪತ್ತೆಯಾಗಿದ್ದವು. ಪಾಸಿಟಿವಿಟಿ ದರ ಶೇ 4.85 ರಷ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.