ADVERTISEMENT

Covid India Update| ಇಂದು 1,49,394 ಕೋವಿಡ್‌ ಪ್ರಕರಣಗಳು ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2022, 4:44 IST
Last Updated 4 ಫೆಬ್ರುವರಿ 2022, 4:44 IST
   

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,49,394 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 1072 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುರುವಾರಕ್ಕೆ ಹೋಲಿಸಿದರೆ, ಶುಕ್ರವಾರ ಶೇ. 13%ರಷ್ಟು ಕಡಿಮೆ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಗುರುವಾರ 1,72,433 ಪ್ರಕರಣಗಳು ವರದಿಯಾಗಿದ್ದವು.

ಸದ್ಯ ದೇಶದಲ್ಲಿ 14,35,569 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 5 ಲಕ್ಷದ (5,00,055) ಗಡಿ ದಾಟಿದೆ.

ADVERTISEMENT

ಸದ್ಯ ದೇಶದ ಪಾಸಿಟಿವಿಟಿ ದರ ಶೇ. 9.27 ಆಗಿದೆ.

ಈ ವರೆಗೆ 168.47 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.