ADVERTISEMENT

India Covid Updates | 16 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 53 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2022, 5:59 IST
Last Updated 11 ಆಗಸ್ಟ್ 2022, 5:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 16,299 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 53 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,42,06,996 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,26,879 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,35,55,041 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,25,076 ಸಕ್ರಿಯ ಪ್ರಕರಣಗಳಿವೆ.

ಪಂಜಾಬ್‌ನಲ್ಲಿ 13,253, ಮಹಾರಾಷ್ಟ್ರದಲ್ಲಿ 11,889, ಕರ್ನಾಟಕದಲ್ಲಿ 10,351, ಕೇರಳದಲ್ಲಿ 9,865, ತಮಿಳುನಾಡಿನಲ್ಲಿ 8,586ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೇಶದಾದ್ಯಂತ ಒಟ್ಟು 207.29 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.