ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,778 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆಯಾಗಿದೆ. ಇದೇ ವೇಳೆ 800 ಜನರು ಚೇತರಿಸಿಕೊಂಡಿದ್ದು, ಸದ್ಯ 23,087 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ 62 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಒಟ್ಟು 5,16,605 ಜನರು ಕೋವಿಡ್‌ನಿಂದ ಪ್ರಾಣಕಳೆದುಕೊಂಡಿದ್ದಾರೆ.
ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 0.26ರಷ್ಟಿದ್ದರೆ, ಕೋವಿಡ್ ಚೇತರಿಕೆ ಪ್ರಮಾಣ ಶೇ 98.75ರಷ್ಟಿದೆ. ಮರಣ ಪ್ರಮಾಣ ಶೇ 1.20ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,77,218 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಮೂಲಕ ಈವರೆಗೆ 78.42 ಕೋಟಿಗೂ ಅಧಿಕ ಮಂದಿಗೆ ಪರೀಕ್ಷೆ ಮಾಡಲಾಗಿದೆ.
ದೇಶದಲ್ಲಿ ಈವರೆಗೆ 181.89 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.