ADVERTISEMENT

Covid-19 India Update: ದೇಶದಲ್ಲಿ ಕೋವಿಡ್‌ನಿಂದ 1,027 ಸಾವು

ಏಜೆನ್ಸೀಸ್
Published 14 ಏಪ್ರಿಲ್ 2021, 9:52 IST
Last Updated 14 ಏಪ್ರಿಲ್ 2021, 9:52 IST
ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಲ್ಲಿ ಯುಗಾದಿ ಹಬ್ಬಕ್ಕೂ ಮುನ್ನಾದಿನ ಕಂಡು ಬಂದಿದ್ದ ಜನಜಂಗುಳಿ
ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಲ್ಲಿ ಯುಗಾದಿ ಹಬ್ಬಕ್ಕೂ ಮುನ್ನಾದಿನ ಕಂಡು ಬಂದಿದ್ದ ಜನಜಂಗುಳಿ   

ನವದೆಹಲಿ: ದೇಶದಲ್ಲಿ 24 ಗಂಟೆಗಳ ಅಂತರದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 1,027 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ಐದು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಒಂದು ದಿನದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 1000 ದಾಟಿದೆ.

ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಬುಧವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 1,84,372 ಹೊಸ ಪ್ರಕರಣಗಳು ದಾಖಲಾಗಿವೆ, ಇದೇ ಅವಧಿಯಲ್ಲಿ 82,339 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ ದೇಶದಲ್ಲಿ 13,65,704 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 1,38,73,825ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,23,36,036 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,72,085 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ADVERTISEMENT

ಒಟ್ಟು ಪ್ರಕರಣಗಳು ಹಾಗೂ ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಭಾರತವು ಈಗಾಗಲೇ ಬ್ರೆಜಿಲ್‌ ಹಿಂದಕ್ಕಿಟ್ಟು ಎರಡನೇ ಸ್ಥಾನಕ್ಕೇರಿದೆ. ಪ್ರಕರಣಗಳ ಸಂಖ್ಯೆ ದಿಢೀರ್‌ ಹೆಚ್ಚಳ ಕಂಡಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಪ್ರವೇಶಿಸುವವರು ಸೋಂಕು ಲಕ್ಷಣಗಳಿದ್ದರೆ, ಕೋವಿಡ್‌–19 ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇಶದಾದ್ಯಂತ ಈವರೆಗೂ 11.11 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ. ಇಂದು ಲಸಿಕೆ ಉತ್ಸವದ ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.