ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 18,840 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 43 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಈ ವರೆಗೆ 5,25,386 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ಈ ಮಧ್ಯೆ, 16,104 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಸದ್ಯ 1,25,028 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ದೇಶದ ದೈನಂದಿನ ಪಾಸಿಟಿವಿಟಿ ದರ ಶೇಕಡ 4.14ರಷ್ಟು ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.