ADVERTISEMENT

India Covid Update: ಹೊಸದಾಗಿ 20,408 ಪ್ರಕರಣ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜುಲೈ 2022, 4:25 IST
Last Updated 30 ಜುಲೈ 2022, 4:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 20,408 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 54 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,43,384ಕ್ಕೆ ತಲುಪಿದೆ.

ಈವರೆಗೆ ಒಟ್ಟು 4,39,79,730 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 5,26,258 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೆಯೇ 4,33,30,442 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.33 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.48 ಆಗಿದೆ.

ಇದುವರೆಗೆ 87.48 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 203.94 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ 5.05ರಷ್ಟಾಗಿದ್ದು, ವಾರದ ಪಾಸಿಟಿವಿಟಿ ದರ 4.92 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.