ADVERTISEMENT

India Covid Updates | 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 49 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2022, 4:50 IST
Last Updated 17 ಜುಲೈ 2022, 4:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 20,528 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,37,50,599ಕ್ಕೆ ಏರಿಕೆಯಾಗಿದೆ. ಆ ಪೈಕಿ 5,25,709 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,30,81,441 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,43,449 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 5.23 ರಷ್ಟಿದೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ 30,613, ಕೇರಳದಲ್ಲಿ 24,645, ತಮಿಳುನಾಡಿನಲ್ಲಿ 17,228, ಮಹಾರಾಷ್ಟ್ರದಲ್ಲಿ 15,521, ಕರ್ನಾಟಕದಲ್ಲಿ 7,296 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 199.98 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.