ADVERTISEMENT

India Covid Updates | 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 40 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2022, 5:38 IST
Last Updated 20 ಜುಲೈ 2022, 5:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 20,557 ಕೋವಿಡ್ಹೊಸ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,38,03,619ಕ್ಕೆ ಏರಿಕೆಯಾಗಿದೆ. ಈವರೆಗೆ5,25,825 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,31,32,140 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,45,654 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 4.13 ರಷ್ಟಿದೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ 28,969, ಕೇರಳದಲ್ಲಿ 22,592, ತಮಿಳುನಾಡಿನಲ್ಲಿ 16,829, ಮಹಾರಾಷ್ಟ್ರದಲ್ಲಿ 14,789, ಕರ್ನಾಟಕದಲ್ಲಿ 7,617 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ ಕೋವಿಡ್ ಆಸ್ಪತ್ರೆ ದಾಖಲಾತಿ ಸಂಖ್ಯೆ ಇಳಿಮುಖವಾಗಿದ್ದು, ಸದ್ಯ 27 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಂಗಳವಾರ 1,013 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಹೊಸದಾಗಿ 1,104 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ನಗರದಲ್ಲಿ 6,901 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 200.61 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.