ADVERTISEMENT

India Covid Updates | ಸಕ್ರಿಯ ಪ್ರಕರಣಗಳ ಸಂಖ್ಯೆ 1.48 ಲಕ್ಷಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 4:18 IST
Last Updated 21 ಜುಲೈ 2022, 4:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 21,566 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 45 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,38,25,185ಕ್ಕೆ ಏರಿಕೆಯಾಗಿದೆ. ಈವರೆಗೆ 5,25,870 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,31,50,434 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,48,881 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 4.25 ರಷ್ಟಿದೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ 28,399, ಕೇರಳದಲ್ಲಿ 22,318, ತಮಿಳುನಾಡಿನಲ್ಲಿ 16,702, ಮಹಾರಾಷ್ಟ್ರದಲ್ಲಿ 14,636, ಕರ್ನಾಟಕದಲ್ಲಿ 7,866 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಹಾಗೂ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಬುಧವಾರ 32,363 ಪರೀಕ್ಷೆಗಳನ್ನು ನಡೆಸಲಾಗಿದ್ದು, 1,478 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 4.56ರಷ್ಟಿದೆ. 27 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 1,251 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ದೇಶದಾದ್ಯಂತ ಒಟ್ಟು 200.92 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.