ADVERTISEMENT

Covid-19 India Update: ಕೇರಳದಲ್ಲಿ 13 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2021, 4:44 IST
Last Updated 3 ಅಕ್ಟೋಬರ್ 2021, 4:44 IST
ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ಆರೋಗ್ಯ ಕಾರ್ಯಕರ್ತರು–ಸಂಗ್ರಹ ಚಿತ್ರ
ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ಆರೋಗ್ಯ ಕಾರ್ಯಕರ್ತರು–ಸಂಗ್ರಹ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 22,842 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 244 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.

22,842 ಹೊಸ ಪ್ರಕರಣಗಳ ಪೈಕಿ ಕೇರಳದಲ್ಲೇ ಶನಿವಾರ ರಾತ್ರಿಯವರೆಗೂ 13,217 ಪ್ರಕರಣಗಳು ವರದಿಯಾಗಿವೆ ಹಾಗೂ 121 ಮಂದಿ ಮೃತಪಟ್ಟಿದ್ದಾರೆ. 24 ಗಂಟೆಗಳಲ್ಲಿ 25,930 ಜನ ಚೇತರಿಸಿಕೊಂಡಿದ್ದು, ಈವರೆಗೂ ಒಟ್ಟು 3,30,94,529 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 4,48,817 ಮಂದಿ ಸಾವಿಗೀಡಾಗಿದ್ದಾರೆ.

ಸಕ್ರಿಯ ಪ್ರಕರಣಗಳು 199 ದಿನಗಳ ಕಡಿಮೆ ಮಟ್ಟಕ್ಕೆ ಇಳಿಕೆಯಾಗಿದೆ. ಪ್ರಸ್ತುತ 2,70,557 ಪ್ರಕರಣಗಳು ಸಕ್ರಿಯವಾಗಿವೆ.

ADVERTISEMENT

ದೇಶದಾದ್ಯಂತ ಇಲ್ಲಿಯವರೆಗೂ 90,51,75,348 ಡೋಸ್‌ ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.